Thursday, December 12, 2024
Homeಜಿಲ್ಲೆಉಡುಪಿ50 Crore Offer | ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ : ಏನಂದ್ರು...

50 Crore Offer | ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ : ಏನಂದ್ರು ಸಿಎಂ ಸಿದ್ದರಾಮಯ್ಯ..?

ಉಡುಪಿ | ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ ಸಫಲ ಆಗಲ್ಲ ಎಂದರು.

ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ ಯಾವಾಗಲೂ ಹಾಗೆ ಆಗಲ್ಲ. ಬಿಜೆಪಿಯವರಿಗೆ ಅಧಿಕಾರದ ದಾಹ. ಅಧಿಕಾರಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗಲ್ಲ ಎಂದು ಹೇಳಿದ್ದಾರೆ.

ಕನಕಪುರ ಬೆಂಗಳೂರು ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಜೊತೆ ಈ ಬಗ್ಗೆ ಯಾರು ಚರ್ಚೆ ಮಾಡಿಲ್ಲ. ಸರಕಾರಿ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದರು.

ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಂದಿನ ಬಜೆಟ್ ನಲ್ಲಿ ಬಂಟ ಅಭಿವೃದ್ಧಿ ನಿಗಮ ಘೋಷಿಸುತ್ತೇನೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 13 ಕೋಟಿ ಹಗರಣ ಆಗಿದ್ದರೆ ನಾವು ತನಿಖೆ ಮಾಡಿಸುತ್ತೇವೆ. ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವ್ಯವಹಾರ ಕುರಿತು ತನಿಖೆಯ ಭರವಸೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments