ತುಮಕೂರು | ಲೋಕಸಭಾ ಚುನಾವಣೆ (Lok Sabha Elections) ಸಮೀಪವಾಗುತ್ತಿರುವ ಬೆನ್ನಲ್ಲೇ ಬಿಜೆಪಿ (BJP) ನಾನಾ ಕಾರ್ಯಕ್ರಮಗಳ ಮೂಲಕ ಮತದಾರರ (Voter) ಗಮನ ಸೆಳೆಯಲು ಮುಂದಾಗುತ್ತಿದೆ. ಹೀಗಾಗಿ ತುಮಕೂರಿನಲ್ಲಿಯೂ (Tumkur) ಕೂಡ ಶಕ್ತಿವಂದನಾ (Shaktivandana) ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.
ಹೌದು,, ತುಮಕೂರು ನಗರದ ಶ್ರೀ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಶಕ್ತಿ ವಂದನಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನೂರಾರು ಮಹಿಳಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಸಹಕಾರ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಸ್ವಾತಂತ್ರ್ಯ ಬಂದ ಮೊದಲ ಬಾರಿಗೆ ಆರು ಬಾರಿ ಬಜೆಟ್ ಮಂಡಿಸಿರುವ ನಿರ್ಮಲಾ ಸೀತರಾಮ್ ಅವರು ನರೇಂದ್ರ ಮೋದಿ ಅವರಿಗೆ ಶಕ್ತಿಯನ್ನು ತುಂಬುತ್ತಿದ್ದಾರೆ. ಈ ದೇಶದಲ್ಲಿ ಸ್ತ್ರೀ ಸಮಾನತೆ, ಹಕ್ಕುಗಳ ಬಗ್ಗೆ ಧ್ವನಿ ಎತ್ತಿದ್ದು 12ನೇ ಶತಮಾನದಲ್ಲಿ ಅಕ್ಕಮಹಾದೇವಿ. ಅಂತೆಯೇ ನರೇಂದ್ರ ಮೋದಿ ಅವರು ಸಹ ಮಹಿಳೆಯ ಸಮಾನತೆಯ ಬಗ್ಗೆ ಶ್ರಮಿಸುತ್ತಿದ್ದಾರೆ ಎಂದರು.
ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ನರೇಂದ್ರ ಮೋದಿ ಅವರು ದೇಶಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಚಾರ. ನಮ್ಮ ದೇಶದ ಸುಭದ್ರತೆಗಾಗಿ, ರೈತರಿಗಾಗಿ, ಮಹಿಳೆಯರನ್ನ ಆರ್ಥಿಕ ಸ್ವಾವಲಂಬನೆಗಳನ್ನಾಗಿಸಲು ಹೀಗೆ ಮಹತ್ವದ ಯೋಜನೆಗಳನ್ನು ಪ್ರಧಾನಿಯವರು ಕೊಟ್ಟಿದ್ದಾರೆ. ಅವರ ಶಕ್ತಿಯನ್ನು ಹೆಚ್ಚಿಸಲು ನಾವೆಲ್ಲಾ ಶ್ರಮಿಸೋಣ ಎಂದು ಕರೆನೀಡಿದರು.
ಶಕ್ತಿ ವಂದನಾ ಕಾರ್ಯಕ್ರಮದಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಶಾಸಕರಾದ ಜಿ. ಬಿ. ಜ್ಯೋತಿಗಣೇಶ್, ಸುರೇಶ್ ಗೌಡ ಸೇರಿದಂತೆ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಸೇರಿದಂತೆ ಮತ್ತಿತರರು ಇದ್ದರು.