ತುಮಕೂರು | ಕೇಂದ್ರ ಸರ್ಕಾರದ (Central Govt) ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಅಮೃತ್ ಭಾರತ್ ಸ್ಟೇಷನ್ (Amrit Bharat Station) ಯೋಜನೆಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ರೈಲ್ವೆ ನಿಲ್ದಾಣಗಳಲ್ಲಿ ತುಮಕೂರು (Tumkur) ರೈಲ್ವೆ ನಿಲ್ದಾಣವು (Railway station) ಕೂಡ ಒಂದಾಗಿದೆ.
ಹೌದು,,, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆಯ 15 ರೈಲು ನಿಲ್ದಾಣಗಳು ಮೇಲ್ದರ್ಜೆಗೆ ಏರಲಿವೆ. ₹372.13 ಕೋಟಿ ವೆಚ್ಚದ ಕಾಮಗಾರಿಗಳಿಗೆ ಫೆ.26ರಂದು ಪ್ರಧಾನಿ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಇನ್ನೂ ಬಂಗಾರ ಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೃಷ್ಣರಾಜಪುರ, ಕುಪ್ಪಂ, ಮಲ್ಲೇಶ್ವರ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್ ಫೀಲ್ಡ್ ರೈಲು ನಿಲ್ದಾಣಗಳು ಮೇಲ್ದರ್ಜೆಗೆ ಏರಲಿವೆ.