ಬೆಂಗಳೂರು | ಲೋಕಸಭೆ ಚುನಾವಣೆಗೆ (Lok Sabha Elections) ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗಲೇ ನಾಮಪತ್ರ ಸಲ್ಲಿಕೆ (Submission of nomination papers) ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರಮುಖ ನಾಯಕರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಇದು ಹಾಸನ ಲೋಕಸಭಾ ಕ್ಷೇತ್ರದ (Hassan Lok Sabha Constituency) ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ನಾಮಪತ್ರ ಸಲ್ಲಿಸುವ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು, ಏಪ್ರಿಲ್ 4 ರಂದು ನಾವು ಪತ್ರ ಸಲ್ಲಿಸುತ್ತೇವೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಚಿವ ಅಶ್ವಥ್ ನಾರಾಯಣ್ ನನಗೆ ಸಾತ್ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ಮುಖಂಡ, ಮಾಜಿ ಶಾಸಕ ಪ್ರೀತಮ್ ಗೌಡ ಸಹಕಾರ ಕೊಡಬೇಕಿದೆ, ಅವರ ಮೇಲೆ ಜವಾಬ್ದಾರಿ ಹೆಚ್ಚಾಗಿದ್ದು ಸಹಕರಿಸುತ್ತಿದ್ದಾರೆ. ಎಲ್ಲರೂ ಕೂಡ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.