ತುಮಕೂರು | 2024ರ ಲೋಕಸಭೆ ಚುನಾವಣೆಯ (Lok Sabha Elections) ಭರಾಟೆ ತುಮಕೂರು (Tumkur) ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಈ ವೇಳೆ ಅಖಾಡಕ್ಕೆ ಇಳಿದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಬರದಿಂದ ಪ್ರಚಾರವನ್ನು ನಡೆಸುತ್ತಿದ್ದಾರೆ.
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಅವರ ಪ್ರಚಾರದ ವೇಳೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ತುಮಕೂರು ಲೋಕಸಭೆಗೆ ವಿ ಸೋಮಣ್ಣನವರು ಸೂಟ್ ಕೇಸ್ ತೆಗೆದುಕೊಂಡು ಬಂದಿದ್ದಾರೆ ಎಂದು ಲೇವಡಿ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಗುಬ್ಬಿ ತಾಲೂಕಿನಲ್ಲಿ ಚುನಾವಣೆ ಪ್ರಚಾರ ಮಾಡುತ್ತಿರುವ ವಿ ಸೋಮಣ್ಣ ತಿರುಗೇಟು ನೀಡಿದ್ದಾರೆ.
ಪರಮೇಶ್ವರ್ ಅಣ್ಣನವರು ಸೂಟ್ ಕೇಸ್ ಕೊಟ್ಟಿದ್ದರು, ಅವರ ಬಳಿ ಇಟ್ಟುಕೊಳ್ಳಲು ಆಗುವುದಿಲ್ಲ ಎಂದು ನನಗೆ ಕೊಟ್ಟಿದ್ದರು, ಅದನ್ನು ತೆಗೆದುಕೊಂಡು ಬಂದಿದ್ದೇನೆ. ಖಾಲಿಯಾದ ಮೇಲೆ ತೆಗೆದುಕೊಂಡು ಹೋಗಿ ಕೊಡುತ್ತೇನೆ ಎಂದು ಲೇವಡಿ ಮಾಡಿದ್ದಾರೆ.
ಈಗಾಗಲೇ ತುಮಕೂರು ಲೋಕಸಭಾದಾದ್ಯಂತ ಭರ್ಜರಿ ಪ್ರಚಾರ ನಡೆಸಿರುವ ವಿ. ಸೋಮಣ್ಣನವರಿಗೆ ಉತ್ತಮ ಪ್ರತಿಕ್ರಿಯ ವ್ಯಕ್ತವಾಗುತ್ತಿದೆ. ಗುಬ್ಬಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಮತ್ತು ಜೆಡಿಎಸ್ ಮುಖಂಡ ನಾಗರಾಜು ಸಾಥ್ ನೀಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.