Thursday, December 12, 2024
Homeಜಿಲ್ಲೆದಕ್ಷಿಣ ಕನ್ನಡDakshina Kannada Marriage | ಹಸೆಮಣೆ ಏರಿದ ಮರುಕ್ಷಣವೇ ಓಡೋಡಿ ಮತಗಟ್ಟೆಗೆ ಬಂದ ನವ ಜೋಡಿ..!

Dakshina Kannada Marriage | ಹಸೆಮಣೆ ಏರಿದ ಮರುಕ್ಷಣವೇ ಓಡೋಡಿ ಮತಗಟ್ಟೆಗೆ ಬಂದ ನವ ಜೋಡಿ..!

ದಕ್ಷಿಣ ಕನ್ನಡ | ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ (Marriage) ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ (Husband Wife) ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ (Polling Station) ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ. ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments