Thursday, December 12, 2024
Homeಜಿಲ್ಲೆಬೆಂಗಳೂರು ನಗರWild elephant | ಕಾಡಾನೆ ಹಾವಳಿ ತಡೆಗೆ ರಾಜ್ಯ ಸರ್ಕಾರದಿಂದ ದಿಟ್ಟ ಕ್ರಮ

Wild elephant | ಕಾಡಾನೆ ಹಾವಳಿ ತಡೆಗೆ ರಾಜ್ಯ ಸರ್ಕಾರದಿಂದ ದಿಟ್ಟ ಕ್ರಮ

ಬೆಂಗಳೂರು | ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ (Wild elephant) ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಡಾನೆ ಹಾವಳಿಗೆ ಸದ್ಯದ ಸಾಬೀತಾದ ಪರಿಹಾರ ರೈಲ್ವೆ ಬ್ಯಾರಿಕೇಡ್ ಅಳವಡಿಕೆಯಾಗಿದ್ದು, ಪ್ರತಿ  ಕಿ.ಮೀ. ಬ್ಯಾರಿಕೇಡ್ ಅಳವಡಿಕೆಗೆ ಸುಮಾರು 1.50 ಕೋಟಿ ರೂ. ವೆಚ್ಚವಾಗುತ್ತಿದೆ. ಮಿಗಿಲಾಗಿ ರೈಲ್ವೆ ಹಳಿಗಳೂ ಸಿಗುವುದಿಲ್ಲ. ತಮಿಳುನಾಡಿನಲ್ಲಿ ಅಳವಡಿಸಿರುವ ಉಕ್ಕಿನ ಹಗ್ಗದ ತಡೆಗಳಿಗೆ (ಸ್ಟೀಲ್ ರೋಪ್) ಪ್ರತಿ ಕಿ.ಮೀ.ಗೆ 45 ಲಕ್ಷ ರೂ. ವೆಚ್ಚವಾಗುತ್ತದೆ ಎನ್ನಲಾಗದ್ದು,  ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು  ಸೂಚಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 312 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಮುನ್ನ ಮತ್ತು ಅಳವಡಿಕೆ ನಂತರದ ಜೀವಹಾನಿ ಮತ್ತು ಬೆಳೆಹಾನಿ ಕುರಿತಂತೆ ತುಲನಾತ್ಮಕ ವರದಿ ಸಲ್ಲಿಸುವಂತೆಯೂ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments