ಮೈಸೂರು | ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್ (Darshan Case) ಹಾಗೂ ಪವಿತ್ರ ಗೌಡ ಸೇರಿ 7 ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದು ಅವರ ಅಭಿಮಾನಿಗಳು ಸೇರಿದಂತೆ ಕರ್ನಾಟಕದ ಸಾಕಷ್ಟು ಜನರಿಗೆ ಸಂತಸವನ್ನು ತಂದಿದೆ. ಆದರೆ ನಟ ಪ್ರಕಾಶ್ ರಾಜ್ ಮಾತ್ರ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದ ನಟ ಪ್ರಕಾಶ್ ರಾಜ್ ಮೈಸೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಈ ವೇಳೆ ನಟ ದರ್ಶನ್ ಅವರಿಗೆ ಜಾಮೀನು ಮಂಜೂರಾದ ಬಗ್ಗೆ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ನಟ ಪ್ರಕಾಶ್ ರಾಜ್. ನಾನು ಸಿನಿಮಾ ಹಾಗೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ, ನಾನು ನನ್ನ ಮಕ್ಕಳ ಬಗ್ಗೆ ಮಾತ್ರ ಮಾತನಾಡಲು ಬಂದಿದ್ದೇನೆ ಕಳ್ ನನ್ ಮಕ್ಕಳ ಬಗ್ಗೆ ಮಾತನಾಡಲು ಅಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನೂ ಬೆನ್ನು ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಅವರಿಗೆ ಇನ್ನಷ್ಟು ರೆಸ್ಟ್ ಮಾಡಲು ಅವಕಾಶ ಸಿಕ್ಕಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದು ಹನುಮ ಜಯಂತಿಯಂದೇ ಜಾಮೀನು ಸಿಕ್ಕಿರುವ ವಿಚಾರ ತಿಳಿದು ಮತ್ತಷ್ಟು ಸಂತಸ ವ್ಯಕ್ತಪಡಿಸಿದ್ದಾರೆ.