Thursday, February 6, 2025
Homeರಾಷ್ಟ್ರೀಯInfosys Narayana Murthy | ಬೆಂಗಳೂರಿನ ಬಗ್ಗೆ ಶಾಕಿಂಗ್ ಸ್ಟೇಟ್ ಮೆಂಟ್ ಕೊಟ್ಟ ಇನ್ಫೋಸಿಸ್‌ ನಾರಾಯಣಮೂರ್ತಿ

Infosys Narayana Murthy | ಬೆಂಗಳೂರಿನ ಬಗ್ಗೆ ಶಾಕಿಂಗ್ ಸ್ಟೇಟ್ ಮೆಂಟ್ ಕೊಟ್ಟ ಇನ್ಫೋಸಿಸ್‌ ನಾರಾಯಣಮೂರ್ತಿ

ಪುಣೆ | ಪ್ರಪಂಚದ ಮೂಲೆ ಮೂಲೆಯಿಂದಲೂ ಪ್ರವಾಸಿಗರನ್ನು, ಉದ್ಯೋಗಿಗಳನ್ನು ಆಕರ್ಷಿಸುವ ರಾಜಧಾನಿ ಬೆಂಗಳೂರಿನ (Bengaluru)  ಬಗ್ಗೆ ಇನ್ಫೋಸಿಸ್‌ (Infosy)  ಸಂಸ್ಥಾಪಕ ನಾರಾಯಣಮೂರ್ತಿ (Narayana Murthy) ಆತಂಕವನ್ನು ಹೊರಹಾಕಿದ್ದಾರೆ.

ಹೌದು.. ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹವಾಮಾನ ಬದಲಾವಣೆ ಕಾರಣ ಮುಂಬರುವ ದಿನಗಳಲ್ಲಿ ಬೆಂಗಳೂರಿಗೆ ದೊಡ್ಡ ಪ್ರಮಾಣದ ವಲಸೆ ಇರಲಿದೆ ಎಂದಿದ್ದಾರೆ.

ಭಾರತ ಸೇರಿ ಹಲವು ದೇಶಗಳಲ್ಲಿ ಇತ್ತೀಚಿಗೆ ದೊಡ್ಡ ಪ್ರಮಾಣದಲ್ಲಿ ಹವಾಮಾನ ಬದಲಾಗುತ್ತಿದ್ದು ಉಷ್ಣಾಂಶದಲ್ಲಿ ಸಾಕಷ್ಟು ಏರಿಳಿತ ನೋಡುತ್ತಿದ್ದೇವೆ. ಮುಂದಿನ 2 ದಶಕಗಳಲ್ಲಿ ಕೆಲ ದೇಶಗಳು ಭಾರತದ ಕಡೆ ನೋಡುವ ಸಂಭವ ಇದೆ. ಬೆಂಗಳೂರು, ಹೈದರಾಬಾದ್, ಪುಣೆಗೆ ವಲಸೆ ಹೆಚ್ಚಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಟ್ರಾಫಿಕ್ ಸಮಸ್ಯೆ ಮತ್ತು ಮಾಲಿನ್ಯ ಹೆಚ್ಚಳದ ಆತಂಕ

ಟ್ರಾಫಿಕ್ ಸಮಸ್ಯೆ, ಮಾಲಿನ್ಯದ ಕಾರಣ ಈ ನಗರಗಳ ಸ್ಥಿತಿ ಹದಗೆಡಬಹುದು. ಹೀಗಾಗಿ ವಲಸೆ ತಡೆಗೆ ಸರ್ಕಾರಗಳು ಅಗತ್ಯ ಕ್ರಮ ತೆಗದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ನಾವು ಭಾರತದಲ್ಲಿ, ವಿಶೇಷವಾಗಿ ಕಾರ್ಪೊರೇಟ್ ಜಗತ್ತು, ರಾಜಕಾರಣಿಗಳು ಮತ್ತು ಅಧಿಕಾರಿಗಳು ತಂಡದ ರೀತಿ ಒಟ್ಟಾಗಿ ಕೆಲಸ ಮಾಡಿದ್ದಲ್ಲಿ ಈ ಹವಾಮಾನ ಬದಲಾವಣೆಯ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments