ದಕ್ಷಿಣ ಕನ್ನಡ | ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ (Puttur Accident) ಬಿದ್ದ ಪರಿಣಾಮ ಮೂವರು ಧಾರೂಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ನಿದ್ರೆ ಮಂಪರಿನಲ್ಲಿದ್ದ ಕಾರಿನ ಚಾಲಕ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಮೂಲ ಕಾರಣ ಎನ್ನಲಾಗಿದೆ. ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ ಮತ್ತು ರಮೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.
ಎಲ್ಲರು ಗೋಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು ಎಂದು ಹೇಳಲಾಗಿದ್ದು. ಬೆಳ್ಳಂಬೆಳಿಗ್ಗೆ ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.