ಶಿವಮೊಗ್ಗ | ಖಾಸಗಿ ಫೈನಾನ್ಸ್ ಗಳ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ (Shivamogga News) ಜಿಲ್ಲೆಯ ಶಿಕಾರಿಪುರ ತಾಲೂಕು ಮಾರವಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು 43 ವರ್ಷದ ಪ್ರೇಮಾ ಎಂದು ಗುರುತಿಸಲಾಗಿದೆ. ಖಾಸಗಿ ಫೈನಾನ್ಸ್ ನಲ್ಲಿ ಮೂರು ಲಕ್ಷ ಸಾಲ ಮಾಡಿದ್ದ ಪ್ರೇಮಾ ಬಡ್ಡಿ ಕಟ್ಟಲಾಗದೆ ನೇಣಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.
ಕೂಲಿ ಕೆಲಸ ಮಾಡುತ್ತಿದ್ದ ಪ್ರೇಮಾ ನಿನ್ನೆ ಸಂಜೆ ಸಾಲಗಾರರು ಮನೆಗೆ ಬಂದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 25 ರಿಂದ 30 % ಬಡ್ಡಿ ಕಟ್ಟುವಂತೆ ಫೈನಾನ್ಸ್ ನವರು ಒತ್ತಾಯಿಸುತ್ತಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.