Wednesday, February 5, 2025
Homeಜಿಲ್ಲೆತುಮಕೂರುElectoral Roll | ತುಮಕೂರು ಜಿಲ್ಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ  ಮತದಾರರಿಗೆ ಜಿಲ್ಲಾಧಿಕಾರಿ ಸೂಚನೆ

Electoral Roll | ತುಮಕೂರು ಜಿಲ್ಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ  ಮತದಾರರಿಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು | ಮತದಾರರ ಪಟ್ಟಿ (Electoral Roll) ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಸಂಬಂಧ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು  ತುಮಕೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು (Electoral Roll) ಆಯಾ ಮತಗಟ್ಟೆ, ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿ, ಚುನಾವಣಾಧಿಕಾರಿಗಳ ಕಚೇರಿ ಹಾಗೂ ceo.karnataka.gov.in    ಮತ್ತು tumkur.nic.in ವೆಬ್‌ಸೈಟ್‌ಗಳಲ್ಲಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಸಾರ್ವಜನಿಕರು  ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತದಾರರ ಪಟ್ಟಿಗಳಲ್ಲಿ (Electoral Roll) ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದಾಗಿದೆ. ಮತದಾರರ ಸೇರ್ಪಡೆಗೆ ನಮೂನೆ-6; ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡೆಗೆ ನಮೂನೆ-6ಎ; ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ/ಹೆಸರು ತೆಗೆದು ಹಾಕಲು ನಮೂನೆ-7 ಹಾಗೂ ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/  ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್ ನೀಡುವಿಕೆ/ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ನಮೂನೆ-8ರಲ್ಲಿ ಮನವಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments