ಬೆಂಗಳೂರು | ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು ಇದೀಗ ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸಮಗ್ರವಾದಂತಹ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.
ಇಂದು ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಎಲ್ಲಾ ಸಾಧಕ ಬಾದಕಗಳನ್ನು ಗಮನಿಸಿ ನಾಳೆ ಘೋಷಣೆ ಮಾಡಲಿದ್ದಾರೆ. ಇದೆಲ್ಲದರ ನಡುವೆ ಇದೀಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ 6 ನೇ ಗ್ಯಾರಂಟಿಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಹೌದು,, ಕಳೆದ ಸರ್ಕಾರದ ಅವಧಿಯಲ್ಲಿ ಏನೆಲ್ಲ ಅಕ್ರಮಗಳು ನಡೆದಿದ್ದವು, ಭ್ರಷ್ಟಾಚಾರಗಳು ನಡೆದಿದ್ದವು, ಇವುಗಳ ತನಿಖೆ ನಡೆಸಿ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಿಸುವುದೇ ನಮ್ಮ 6 ನೇ ಗ್ಯಾರಂಟಿ ಎಂದು ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಿಗಮದಲ್ಲಿ ಆದಂತಹ ಹಗರಣಗಳು, ಇದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡಿದ್ದೇವೆ ಎರಡು ದಿನಗಳ ಒಳಗಾಗಿ ತನಿಖೆ ಮಾಡಲು ಆದೇಶ ನೀಡಿದ್ದಾರೆ. ಹೀಗಾಗಿ ಚುನಾವಣೆಯ ಹಿನ್ನೆಲೆಯಲ್ಲಿ ಇದ್ದಂತಹ ನಿಲುವು ನಾವು ಈಗಲೂ ಕೂಡ ಬದ್ಧರಾಗಿದ್ದೇವೆ. ಹಗರಣಗಳಿಗೆ ಕೊನೆ ಹಾಡುತ್ತೇವೆ ಎಂದು ಹೇಳಿದ್ದಾರೆ.