Thursday, December 12, 2024
Homeಜಿಲ್ಲೆಬೆಂಗಳೂರು ನಗರಧಾರವಾಡ - ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ..!

ಧಾರವಾಡ – ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ..!

ಬೆಂಗಳೂರು | ದೇಶದ ಐದು ಕಡೆಗಳಲ್ಲಿ ನಮ್ಮೆಲ್ಲರ ಕನಸಿನ ವಂದೇ ಭಾರತ ಎಕ್ಸ್ ಪ್ರೆಸ್  ರೈಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಏಕಕಾಲಕ್ಕೆ ಚಾಲನೆ ನೀಡಿದ್ದು, ಧಾರವಾಡದಿಂದ ಬೆಂಗಳೂರಿಗೆ ರಾಜ್ಯದ ಎರಡನೇ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ಜನರು ಅತ್ಯಂತ ಕಡಿಮೆ ಅವಧಿಯಲ್ಲಿ ವೇಗವಾಗಿ ಬೆಂಗಳೂರು ತಲುಪಲು ಅನುಕೂಲವಾಗಲಿದೆ.

 ಉತ್ತರ ಕರ್ನಾಟಕ ಭಾಗದ ಜನತೆಗೆ ಈ ಸೌಲಭ್ಯ ಒದಗಿಸಿಕೊಟ್ಟ ನಮ್ಮ ನೆಚ್ಚಿನ ಪ್ರಧಾನಮಂತ್ರಿ ‌ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ನಮ್ಮವರೇ ಆದ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments