ತುಮಕೂರು | ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 (SSLC exam) ಮೇ 26 ರಿಂದ ಜೂನ್ 2ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ (District Collector Shubha Kalyan) ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 35 ಪರೀಕ್ಷಾ (SSLC exam) ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಿರುವ ಹಾಗೂ ಎಲ್ಲಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ 11951 ಮಕ್ಕಳಿಗೆ ಸುಗಮವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಇದನ್ನು ಓದಿ : Money Matters | ಶ್ರೀಮಂತ ಜೀವನ ನಡೆಸಬೇಕೆಂದರೆ ಎಷ್ಟು ಮೂಲದಿಂದ ಹಣ ಬರಬೇಕು..?
ಎರಡು ಶೈಕ್ಷಣಿಕ ಜಿಲ್ಲೆಗಳಲ್ಲಿ (SSLC exam) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು
ಡಿಡಿಪಿಐ ಮನಮೋಹನ ಮಾತನಾಡಿ, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 22 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 7429 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಮಧುಗಿರಿ ಡಿಡಿಪಿಐ ಗಿರಿಜಾ ಸಭೆಗೆ ಮಾಹಿತಿ ನೀಡುತ್ತಾ, ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 4522 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ (SSLC exam) ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಮಾರ್ಗಗಳನ್ನು ರಚಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಹಾಗೂ ಪರೀಕ್ಷಾ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಸೌಲಭ್ಯ ಒದಗಿಸಲು ಕ್ರಮವಹಿಸಲಾಗಿದೆ ಡಿಡಿಪಿಐಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.