ಬೆಳಗಾವಿ | ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 24ರ ಸೋಮವಾರ ಜಿಲ್ಲೆಯ 3 ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಭಾನುವಾರ ಪ್ರಕಟಣೆಯಲ್ಲಿ, ಖಾನಾಪುರ, ಕಿತ್ತೂರು ಮತ್ತು ಬೆಳಗಾವಿ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ.