Thursday, December 12, 2024
Homeಜಿಲ್ಲೆತುಮಕೂರುಕಾಂಗ್ರೆಸ್ ಮಾಜಿ ಶಾಸಕ ಶಫಿ ಅಹಮದ್ ಮನೆಗೆ ರಹಸ್ಯ ಭೇಟಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ...

ಕಾಂಗ್ರೆಸ್ ಮಾಜಿ ಶಾಸಕ ಶಫಿ ಅಹಮದ್ ಮನೆಗೆ ರಹಸ್ಯ ಭೇಟಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ..!

ತುಮಕೂರು | 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತುಮಕೂರು ನಗರದ ಜೆಡಿಎಸ್ ಅಭ್ಯರ್ಥಿ ಎನ್ ಗೋವಿಂದರಾಜು ಪರ ರಾಜ್ಯದ್ಯಕ್ಷ ಸಿ ಎಂ ಇಬ್ರಾಹಿಂ ಅಖಾಡಕ್ಕೆ ಇಳಿದಿದ್ದಾರೆ.

ತುಮಕೂರಿನ ಮಾಜಿ ಕಾಂಗ್ರೆಸ್ ಶಾಸಕ ಶಫಿ ಅಹಮದ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಈ ಬಾರಿ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಶಫಿ ಅಹಮದ್ ಅವರ ಮನೆಯಲ್ಲಿ ಮಾತುಕತೆ ನಡೆಸಿದ ಇಬ್ರಾಹಿಂ ಮುಂದಿನ ದಿನಗಳಲ್ಲಿ ತುಮಕೂರು ನಗರದಲ್ಲಿನ ಮುಸ್ಲಿಂ ಸಮುದಾಯಕ್ಕೆ ಸಾಕಷ್ಟು ಅನುಕೂಲ ಮಾಡಿಕೊಡುವ ಭರವಸೆ ನೀಡಿದ್ದಾರೆ. ಜೊತೆಗೆ ಜೆಡಿಎಸ್ ಪಕ್ಷಕ್ಕೆ ತಮ್ಮ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್ ಸಿ ಆಂಜಿನಪ್ಪ, ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿ ಗೋವಿಂದರಾಜು, ಮುಖಂಡ ಪಾವಗಡ ಶ್ರೀರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments