ಕೇರಳ | ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಜನವರಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೇರಳದ (Kerala) ಬಗ್ಗೆ ಕೇಂದ್ರ ಸರ್ಕಾರದ (Central Govt) ನಿರ್ಲಕ್ಷ್ಯ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲು ಮುಂದಾಗಿದ್ದಾರೆ.
ಶುಕ್ರವಾರ ನಡೆದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ ಡಿಎಫ್) ಸಭೆ ಈ ನಿರ್ಧಾರ ಕೈಗೊಂಡಿದೆ.
Assembly elections Telangana | ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಬಳಿ ಸ್ವಂತ ಕಾರು ಕೂಡ ಇಲ್ಲ – karnataka360.in
ಎಲ್‌ಡಿಎಫ್ ಸಂಚಾಲಕ ಮತ್ತು ಸಿಪಿಐ(ಎಂ) ಹಿರಿಯ ನಾಯಕ ಇ ಪಿ ಜಯರಾಜನ್ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯೇತರ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಎಲ್ಲಾ ಸಮಾನ ಮನಸ್ಕ ಪಕ್ಷಗಳನ್ನು ಸಹ ಪ್ರತಿಭಟನೆಗೆ ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.