Tuesday, January 7, 2025
Homeಜಿಲ್ಲೆತುಮಕೂರುKannada Sahitya Sammelana | ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ :...

Kannada Sahitya Sammelana | ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ..!

ತುಮಕೂರು | ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ (Kannada Sahitya Parishad) ನಗರದ ಗಾಜಿನ ಮನೆಯಲ್ಲಿ (glass house) ಡಿಸೆಂಬರ್ 29 ಹಾಗೂ 30ರಂದು 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sahitya Sammelana) ನಡೆಸಲು ಉದ್ದೇಶಿಸಿದ್ದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ತಮ್ಮ ಇಲಾಖೆಗೆ ಹಂಚಿಕೆ ಮಾಡಿರುವ ಜವಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ (Shubha Kalyan) ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Tumkur DC | ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಎತ್ತಂಗಡಿ : ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ..? – karnataka360.in

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುವರ್ಣ ಕರ್ನಾಟಕದ ಸುಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನವನ್ನು ವಿಶೇಷವಾಗಿ ಆಚರಿಸಬೇಕು. ನಗರದ ಮುಖ್ಯ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು ಎಂದು ತಿಳಿಸಿದರಲ್ಲದೆ, ಕನ್ನಡ ನಾಡು ನುಡಿಯ ಬಗ್ಗೆ ಪ್ರೇರೇಪಿತರಾಗಬೇಕೆಂಬ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಸುಮಾರು 3000 ಸಾಹಿತ್ಯಾಸಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ವೇದಿಕೆ, ಆಸನ, ಶಾಮಿಯಾನ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದರು.

ಸಮ್ಮೇಳನದಲ್ಲಿ ಆರೋಗ್ಯ ತುಮಕೂರು ಅಭಿಯಾನ, ನರೇಗಾ ಯೋಜನೆ ಅನುಷ್ಠಾನ ಕುರಿತು ಹಾಗೂ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳು ಸ್ಟಾಲ್‌ಗಳನ್ನು ಹಾಕಬೇಕು ಎಂದು ಸೂಚನೆ ನೀಡಿದರು.

ಸಮ್ಮೇಳನ ದಿನದಂದು ಗಾಜಿನ ಮನೆಯ ಆವರಣದಲ್ಲಿ ಸ್ವಚ್ಛತೆ, ನೀರಿನ ವ್ಯವಸ್ಥೆಯನ್ನು ಒದಗಿಸಬೇಕು. ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನೌಕರರು; ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆಯ ಶಿಕ್ಷಕರು ಹಾಗೂ ನೌಕರರಿಗೆ 2 ದಿನಗಳ ಕಾಲ ಅನ್ಯ ಕಾರ್ಯ ನಿಮಿತ್ತ ರಜಾ ಸೌಲಭ್ಯ ಆದೇಶವನ್ನು ಹೊರಡಿಸಬೇಕೆಂದು ಸೂಚಿಸಿದರು.

ಸಮ್ಮೇಳನದ ಯಶಸ್ವಿಗಾಗಿ ಸ್ವಾಗತ ಸಮಿತಿ, ನಗರಾಲಂಕಾರ, ಮೆರವಣಿಗೆ, ವೇದಿಕೆ, ಗೋಷ್ಠಿ, ನೆನಪಿನ ಸಂಚಿಕೆ, ಸಾಂಸ್ಕೃತಿಕ, ಉಪಹಾರ, ನೋಂದಣಿ, ಪ್ರಚಾರ, ಆಹ್ವಾನ ಪತ್ರಿಕೆ ವಿತರಣೆ, ವಸತಿ, ಆರೋಗ್ಯ ಮತ್ತು ನೈರ್ಮಲ್ಯ, ಮಹಿಳಾ ಹಾಗೂ ವಿದ್ಯಾರ್ಥಿ ಸಮಿತಿ ಸೇರಿದಂತೆ 15 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ರಮೇಶ್, ರೇಷ್ಮೆ ಇಲಾಖೆ ಉಪನಿರ್ದೇಶಕ ಡಾ:ಬಾಲಕೃಷ್ಣಪ್ಪ, ತಹಶೀಲ್ದಾರ್ ಸಿದ್ದೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುರೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments