Thursday, December 12, 2024
Homeಜಿಲ್ಲೆಬೆಂಗಳೂರು ನಗರಬೆಂಗಳೂರು ಉಗ್ರರ ಸುರಕ್ಷಿತ ತಾಣ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ

ಬೆಂಗಳೂರು ಉಗ್ರರ ಸುರಕ್ಷಿತ ತಾಣ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ

ಬೆಂಗಳೂರು | ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ.‌ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು.

ಬಹಳಷ್ಟು ಕೇಸ್ ಗಳು ಪೊಲೀಸ್ ಸ್ಟೇಶನಲ್ಲಿ  ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ‌ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ ಹಾಕಿ‌ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪಿಸಿದರು.

ಇಲ್ಲೇ ನೆಲಸಿ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವಂತಹ ಕೆಲಸ ಆಗುತ್ತಿದೆ. ಅಂತರಾಷ್ಟ್ರೀಯ ಐಎಸ್ ಐ ಇವರ ಸಂಪರ್ಕದಲ್ಲಿದ್ದಾರೆ. ಸಿಸಿಬಿ ಅಧಿಕಾರಿಗಳನ್ನು ಬಹಿರಂಗ ಪಡಿಸಿ, ಇದರ ಆಳ ಮತ್ತು ಉದ್ದ ದೊಡ್ಡದಿದೆ. ಇದಕ್ಕೆಲ್ಲಾ ಅಂತಾರಾಷ್ಟ್ರೀಯ ಕುಮ್ಮಕ್ಕು ಇದೆ. ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲುಸುತ್ತೇನೆ ಎಂದರು.

ಉಗ್ರರ ವಿರುದ್ದದ ಕೇಸ್ ಗಳನ್ನು ಕೂಡಲೇ ತನಿಖೆಗೆ  ಎನ್ ಐಎಗೆ ಕೊಡಬೇಕು. ಬೆಂಗಳೂರು ಸುರಕ್ಷತೆ ಬಗ್ಗೆ  ಅಧಿಕಾರಿಗಳು ಫೀಲ್ಡ್ ಗೆ ಇಳಿಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಪೋಟ ಮಾಡುವ ಹುನ್ನಾರ ಇದೆ. ಇದನ್ನ  ಸರ್ಕಾರ  ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments