ಬೆಂಗಳೂರು | ಲೋಕಸಭೆ ಚುನಾವಣೆಯ (Lok Sabha Elections) ಹಾವೇರಿ ಲೋಕಸಭಾ ಕ್ಷೇತ್ರದ (Haveri Lok Sabha Constituency) ಬಿಜೆಪಿ ಅಭ್ಯರ್ಥಿಯಾಗಿ (BJP candidate) ಕಣಕ್ಕಿಳಿದಿರುವ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಬೆಂಗಳೂರಿನ ಮಾಜಿ ಸಚಿವ ಬಿ ಸಿ ಪಾಟೀಲ್ (BC Patil) ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ಬಿಸಿ ಪಾಟೀಲ್ ಅವರು ಜಿಲ್ಲೆಯಲ್ಲಿ ತಮ್ಮದೇ ಆದಂತಹ ಚಾಪನ್ನ ಮೂಡಿಸಿಕೊಂಡು ಪಕ್ಷದ ಹೈಕಮಾಂಡ್ ನಲ್ಲಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದರು.
ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಕೊನೆಯದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಬಿಸಿ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದೇನೆ, ನಿಮ್ಮೆಲ್ಲರ ಸಹಕಾರ ಇರಲಿ ಪಕ್ಷ ಎಂದ ಮೇಲೆ ಸಾಕಷ್ಟು ಅಭ್ಯರ್ಥಿಗಳು ಟಿಕೆಟ್ ಗಾಗಿ ಆಕಾಂಕ್ಷಿಗಳಿರುತ್ತಾರೆ. ಆದರೆ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲು ಸಾಧ್ಯವಾಗುತ್ತದೆ. ಹೀಗಾಗಿ ಮುನಿಸು ಮರೆತು ಒಗ್ಗಟ್ಟಿನಿಂದ ಚುನಾವಣೆಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಮಾಜಿ ಸಚಿವ ಬಿಸಿ ಪಾಟೀಲ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.