ಬೆಂಗಳೂರು | ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನಿಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರು ಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ ಹೇಳಿದ್ದರು. ಈಗ ಹಣ ಹಾಕುತ್ತೇವೆ ಅಂತ ಹೇಳುತ್ತಿದ್ದಾರೆ. ಇವರು ಮತ್ತೆ ಮಾತಿಗೆ ತಪ್ಪಿದ್ದಾರೆ ಎಂದು ಆರೊಪಿಸಿದರು.
ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಅಕ್ಕಿಗೆ ಐವತ್ತರಿಂದ ಆರವತ್ತು ರೂಪಾಯಿ ಬೆಲೆ ಇದೆ. ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡುವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ. ಕರೆಂಟ್ ವಿಚಾರದಲ್ಲಿಯೂ ಕಂಡಿಷನ್ ಹಾಕಿ ಅದನ್ನೆ ಮಾಡಿದ್ದಾರೆ. ಹತ್ತು ಕೆಜಿ ಅಕ್ಕಿಯನ್ನು ನರೇಂದ್ರ ಮೋದಿ ಸರ್ಕಾರ ಡಿಸೆಂಬರ್ ವರೆಗೂ ಕೊಟ್ಟಿದೆ ಹತ್ತು ಕೆಜಿ ಕೊಟ್ಟವರು ಇವರೇ ಮೊದಲಲ್ಲಾ ಎಷ್ಟೇ ಖರ್ಚಾದರೂ ಅಕ್ಕಿ ಕೊಡುವುದಾಗಿ ಹೇಳಿದವರು ಈಗ ಮಾತಿಗೆ ತಪ್ಪಿ ಜನರಿಗೆ ಎರಡೂವರೆ ಕೆಜಿ ಮಾತ್ರ ದೊರೆಯುವಂತೆ ಮಾಡಿದ್ದಾರೆ ಎಂದರು.