ನವದೆಹಲಿ | 2024ರ ಲೋಕಸಭೆ ಚುನಾವಣೆಗೆ (2024 Lok Sabha Elections) ಕೆಲವೇ ವಾರಗಳು ಮಾತ್ರ ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷ (Congress party) ರಾಜ್ಯದ 7 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ ಬಿಜೆಪಿ (BJP) ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ (BJP ticket announcement) ಮಾಡುವ ಮೂಲಕ ಕೆಲವು ಅಭ್ಯರ್ಥಿಗಳಿಗೆ ಅಚ್ಚರಿಯನ್ನು ಮೂಡಿಸಿದರೆ ಮತ್ತೆ ಕೆಲವು ಅಭ್ಯರ್ಥಿಗಳಿಗೆ ನಿರಾಸೆಯನ್ನು ಮೂಡಿಸಿದೆ.
ಸುಮಾರು 10 ಕ್ಕಿಂತ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದ ತುಮಕೂರು ಲೋಕಸಭೆ ಕ್ಷೇತ್ರ, ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ ಈ ಬಾರಿ ಟಿಕೆಟ್ ಬೇಕು ಎಂದು ಬೇಡಿಕೆ ಇಟ್ಟಿದ್ದ ಬಳ್ಳಾರಿ ಕ್ಷೇತ್ರ, ಕೆ ಎಸ್ ಈಶ್ವರಪ್ಪನವರ ಪುತ್ರನಿಗೆ ಟಿಕೆಟ್ ಕೊಡಬೇಕು ಎಂದು ಹೇಳಲಾಗುತ್ತಿದ್ದ ಹಾವೇರಿ ಕ್ಷೇತ್ರ, ಕ್ಷೇತ್ರದಲ್ಲಿ ಏನು ಕೆಲಸ ಮಾಡಿಲ್ಲ ಶೋಭಾ ಕರಂದ್ಲಾಜೆಯವರಿಗೆ ಟಿಕೆಟ್ ನೀಡಬೇಡಿ ಎಂದು ವಿರೋಧ ವ್ಯಕ್ತವಾಗುತ್ತಿದ್ದ ಉಡುಪಿ ಚಿಕ್ಕಮಗಳೂರು ಕ್ಷೇತ್ರ.
ಎರಡು ಬಾರಿ ಸಂಸದನಾಗಿದ್ದೇನೆ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದೇನೆ ಟಿಕೆಟ್ ಸಿಗುತ್ತದೆ ಎಂಬ ಭರವಸೆ ಇದೆ ಎನ್ನಲಾಗುತ್ತಿದ್ದ ಮೈಸೂರು ಕ್ಷೇತ್ರ, ಡಿಕೆ ಬ್ರದರ್ಸ್ ಗೆ ಟಾಂಗ್ ಕೊಡಲು ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದು ಹೇಳಲಾಗುತ್ತಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರ, ಸದಾನಂದಗೌಡರು ಚುನಾವಣೆ ರಾಜಕೀಯದಿಂದ ಹಿಂದೆ ಸರಿಯುವಂತಹ ಬೆಂಗಳೂರು ಉತ್ತರ ಕ್ಷೇತ್ರ, ಟಿಕೆಟ್ ಸಿಕ್ಕರೂ ಸರಿ ಸಿಗದೇ ಇದ್ದರೂ ಸರಿ ಪಕ್ಷಕ್ಕೋಸ್ಕರ ಕೆಲಸ ಮಾಡುತ್ತೇನೆ ಎಂದು ಹೇಳಲಾಗುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರ.
ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಹೈಕಮಾಂಡ್ ನಿರೀಕ್ಷಗೆ ತಕ್ಕಂತೆ, ನಿರೀಕ್ಷೆಗೂ ಮೀರಿ ಕೆಲವು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಸಾಕಷ್ಟು ಅಚ್ಚರಿಯನ್ನು ಮೂಡಿಸಿದೆ. ಇದರ ಜೊತೆಗೆ ಎದುರಾಳಿ ಕಾಂಗ್ರೆಸ್ ಪಕ್ಷಕ್ಕೆ ಭಯ ಹುಟ್ಟಿಸುವಂತಹ ಪ್ರಯತ್ನ ಮಾಡಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಗಳ ಪಟ್ಟಿ
- ಬಿಜಾಪುರ (ಎಸ್ ಸಿ) – ರಮೇಶ್ ಜಿಗಜಿಣಗಿ
- ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
- ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
- ಕಲಬುರಗಿ- ಉಮೇಶ್ ಜಾಧವ್
- ಬೀದರ್- ಭಗವಂತ ಖೂಬಾ
- ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
- ಬಳ್ಳಾರಿ (ಎಸ್ ಟಿ) – ಶ್ರೀರಾಮುಲು
- ಹಾವೇರಿ- ಬಸವರಾಜ ಬೊಮ್ಮಾಯಿ
- ಧಾರವಾಡ- ಪ್ರಹ್ಲಾದ್ ಜೋಶಿ
- ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
- ಶಿವಮೊಗ್ಗ- ಬಿ.ವೈ. ರಾಘವೇಂದ್ರ
- ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
- ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
- ತುಮಕೂರು – ವಿ. ಸೋಮಣ್ಣ
- ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
- ಚಾಮರಾಜನಗರ (ಎಸ್ ಸಿ) – ಎಸ್. ಬಸವರಾಜು
- ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
- ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
- ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
- ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ