ತುಮಕೂರು | ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಜೂಜು ಅಡ್ಡೆಗಳು (Gambling) ಹೆಚ್ಚಾಗುತ್ತಿದ್ದು ಇವುಗಳನ್ನು ನಿಯಂತ್ರಿಸಲು ಪೊಲೀಸರು (Police) ಮಿಂಚಿನ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದರ ಒಂದು ಭಾಗವಾಗಿ ಇದೀಗ 5 ಜನರನ್ನು ಬಂಧಿಸಿದ್ದು 6 ಬೈಕ್ ಅನ್ನು ವಶಕ್ಕೆ ಪಡೆದಿರುವ ಘಟನೆ ತುಮಕೂರು (Tumakuru) ಜಿಲ್ಲೆಯ ಗುಬ್ಬಿ (Gubbi) ತಾಲೂಕಿನ ಸಿ ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು,,, ಅಕ್ರಮವಾಗಿ ನಡೆಯುತ್ತಿದ್ದ ಜೂಜು ಆಡ್ಡೆಯ ಮೇಲೆ ದಾಳಿ ನಡೆಸಿದ ಗುಬ್ಬಿ ತಾಲೂಕಿನ ಸಿ ಎಸ್ ಪುರ ಪೊಲೀಸ್ ಠಾಣೆಯ ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾತ್ರವಲ್ಲದೆ ಅವರಿಂದ 6 ಬೈಕ್ ಮತ್ತು 15,500 ರೂ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿ ನಂದಿ ಗ್ರಾಮದ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜು ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆದರಿಸಿ ಸಿ ಎಸ್ ಪುರ ಪಿಎಸ್ಐ ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ್ದು ಇದೀಗ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.