ಮೈಸೂರು | ಮೈಸೂರಿನ ರಂಗಾಯಣವು ಭಾರತೀಯ ರಂಗಶಿಕ್ಷಣ ಕೇಂದ್ರದಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿ ಕೋರ್ಸಿನ ಪ್ರವೇಶಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ರಂಗತರಬೇತಿ ಕೋರ್ಸಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಅಭ್ಯರ್ಥಿಗಳ ವಯೋಮಿತಿಯು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕಡೆಯ ದಿನಾಂಕಕ್ಕೆ 18 ವರ್ಷ ತುಂಬಿರಬೇಕು. ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಹಾಗೂ ಮಾಹೆಯಾನ 5000 ರೂ.ಗಳ ವಿದ್ಯಾರ್ಥಿವೇತನ ನೀಡಲಾಗುವುದು.
ರಂಗ ತರಬೇತಿಗೆ ಸೇರ ಬಯಸುವ ವಿದ್ಯಾರ್ಥಿಗಳು ರಂಗಾಯಣದ ವೆಬ್‌ಸೈಟ್ http://rangayanamysore.karnataka.gov.in ಮೂಲಕ ಅಥವಾ ರಂಗಾಯಣದ ಕಚೇರಿಯಲ್ಲಿ ಅರ್ಜಿ ಪಡೆಯಬಹದಾಗಿದೆ. ಅರ್ಜಿ ಶುಲ್ಕವನ್ನು ಸಾಮಾನ್ಯ ವರ್ಗದವರಿಗೆ 230 ರೂ. ಹಾಗೂ ಪರಿಶಿಷ್ಟ ಜಾತಿ/ ಪ.ವರ್ಗ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 180 ರೂ.ಗಳನ್ನು ನಿಗಧಿಪಡಿಸಲಾಗಿದೆ. ಅರ್ಜಿದಾರರು ನಿಗಧಿಪಡಿಸಿದ ಶುಲ್ಕವನ್ನು ಉಪನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಡಿಡಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ರಂಗಾಯಣ, ಕಲಾಮಂದಿರ ಆವರಣ, ವಿನೋಬ ರಸ್ತೆ, ಮೈಸೂರು-570005 ಇವರಿಗೆ ಜೂನ್ 5 ರೊಳಗಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ವಾ. 0821-2512639, ಮೊ.ಸಂ 9448938661/ 9148827720/ 8867514311 ನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ರಂಗಾಯಣದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.