Thursday, December 12, 2024
Homeತಂತ್ರಜ್ಞಾನChandrayaan-3 । ಭಾರತಕ್ಕೆ ಇಂದು ಐತಿಹಾಸಿಕ ದಿನ : ಮಿಷನ್ ಚಂದ್ರಯಾನ – 3 ಗೆ...

Chandrayaan-3 । ಭಾರತಕ್ಕೆ ಇಂದು ಐತಿಹಾಸಿಕ ದಿನ : ಮಿಷನ್ ಚಂದ್ರಯಾನ – 3 ಗೆ ಒಂದೇ ಹೆಜ್ಜೆ ಬಾಕಿ..!

ತಂತ್ರಜ್ಞಾನ |  ಇಂದು ಇಸ್ರೋ ಹಾಗು ಭಾರತದ ಪಾಲಿಗೆ ಐತಿಹಾಸಿಕ ದಿನ. ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಮಿಷನ್ ಇಂದು ಚಂದ್ರನ ಮೇಲ್ಮೈ ನಲ್ಲಿ ಯಾವುದೇ ತೊಂದರೆ ಇಲ್ಲದೆ ಸುರಕ್ಷಿತವಾಗಿ ಕಾಲಿಡಲು ಸರ್ವ ಸನ್ನದ್ಧವಾಗಿದೆ. ಈ ಘಟನೆಯನ್ನು ಅತ್ಯಂತ ಹತ್ತಿರದಿಂದ ನೋಡಲು ಭಾರತೀಯರು, ವಿಜ್ಞಾನ ಆಸಕ್ತರು ತುದಿಗಾಲ ಮೇಲೆ ನಿಂತಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುತ್ತಿದೆ. ಈ ಅದ್ಭುತವನ್ನು ಸಾಧಿಸುವ ಮೂಲಕ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿದ ಇತರ ರಾಷ್ಟ್ರಗಳಲ್ಲಿ ಭಾರತವೂ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸಿದ್ಧವಾಗಿದೆ. ಏಕೆಂದರೆ ಇದು ಚಂದ್ರನ ದಕ್ಷಿಣ ಧೃವವನ್ನು ತಲುಪಲಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಳ್ಳಲಿದೆ.

ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಾನವನ ಜಾಣ್ಮೆ ಮತ್ತು ನಿರ್ಣಯಕ್ಕೆ ಸಾಕ್ಷಿಯಾಗಿದೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಒಳಗೊಂಡಿರುವ LM, ಚಂದ್ರನ ಭೂಪ್ರದೇಶದಲ್ಲಿ ಅತ್ಯಂತ ಸುರಕ್ಷಿತವಾಗಿ ಹಗುರವಾಗಿ ಚಂದ್ರನ ನೆಲವನ್ನು ಸ್ಪರ್ಶಿಸುವ ಮೂಲಕ ಇತಿಹಾಸ ನಿರ್ಮಿಸಲು ಸಿದ್ಧವಾಗಿದೆ. ಬುಧವಾರ ಸಂಜೆ ಸರಿಯಾಗಿ ಸಂಜೆ 6:04 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಲಿದೆ.

ವಿಕ್ರಂ ಸುರಕ್ಷಿತವಾಗಿ ಚಂದ್ರನ ಅಂಗಳವನ್ನ ತಲುಪಿದರೆ ವಿಶ್ವದಲ್ಲಿ ವಿಕ್ರಮ ಸ್ಥಾಪಿಸಿದ ಗರಿಮೆ ಇಸ್ರೋ ಪಾಲಿಗೆ ಒದಗಿ ಬರಲಿದೆ. ಚಂದ್ರಯಾನ-3 ರ ಲ್ಯಾಂಡಿಂಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಲಿದೆ. ಏಕೆಂದರೆ ಇದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿ ಗುರುತಿಸಿಕೊಳ್ಳಲಿದೆ. ಅಮೇರಿಕಾ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಸೇರಲಿದೆ. ಈ ಮೂಲಕ ಭಾರತ ಬಾಹ್ಯಾಕಾಶ ಪರಿಶೋಧನೆಯಲ್ಲಿ ವಿಕ್ರಮ ಸಾಧಿಸಿದ ಶ್ರೇಷ್ಠತೆಗೆ ಒಳಗಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments