Thursday, December 12, 2024
Homeಜಿಲ್ಲೆಬಳ್ಳಾರಿChief Minister Siddaramaiah | ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಪ್ರಧಾನಿ ನರೇಂದ್ರ ಮೋದಿ

Chief Minister Siddaramaiah | ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಪ್ರಧಾನಿ ನರೇಂದ್ರ ಮೋದಿ

ಬಳ್ಳಾರಿ | ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರರೆಗೂ ಸರಣಿ ಸುಳ್ಳು ಗಳನ್ನು ಹೇಳಿದರು. ನೀವು ಆರೋಪ ಸಾಬೀತಿಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದರು.

ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ ಎಂದರು.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ ಎಂದರು.

ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ  ಮೋದಿಯವರು ಎಲ್ಲಾ ಮುಗಿಸಿ ಹೋದರು ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments