Wednesday, February 5, 2025
Homeಜಿಲ್ಲೆಬೆಳಗಾವಿCM Siddaramaiah | ಬಿಜೆಪಿ-ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಸವಾಲು..!

CM Siddaramaiah | ಬಿಜೆಪಿ-ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಸವಾಲು..!

ಬೆಳಗಾವಿ | ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ  ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್  ಮಾಣಿಪ್ಪಾಡಿ  ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ  ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.

ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ  ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ  ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು  ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ಟಾಂಗ್ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments