ತುಮಕೂರು | ಲೋಕಸಭೆ ಚುನಾವಣೆಯ (Lok Sabha Elections) ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ (Congress Govt) ಸಿಎಂ ಬದಲಾವಣೆ (Change of CM) ಆಗಬಹುದು ಎಂಬ ಸೂಚನೆಯನ್ನು ತಿಪಟೂರಿನಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ (MLA SR Srinivas) ನೀಡಿದ್ದಾರೆ.
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟುಗಳನ್ನು ಗೆಲ್ಲಬೇಕು, ಗೆಲ್ಲದೆ ಹೋದರೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ (Siddaramaiah resigns) ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರ ಪರ ಕೆಲಸ ಮಾಡುವ ನಾಯಕ. ಅವರನ್ನು ಉಳಿಸಿಕೊಳ್ಳುವ ಕೆಲಸ ನಾವು ಮಾಡಬೇಕೆಂದರೆ, ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯನನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕೆಂದರೆ ತುಮಕೂರು ಲೋಕಸಭೆಯ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡರನ್ನು ಗೆಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಒಟ್ಟಾರೆಯಾಗಿ ಲೋಕಸಭೆ ಚುನಾವಣೆ ಮುಗಿದ ನಂತರ ಚುನಾವಣೆಯಲ್ಲಿ ಹಿನ್ನಡೆಯಾದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ. ಇಲ್ಲವಾದರೆ ಡಿಕೆ ಶಿವಕುಮಾರ್ ಬಣ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಬಹುದು ಸದ್ಯದ ಸ್ಥಿತಿಗತಿಯಲ್ಲಿ ರಾಜೀನಾಮೆಯ ವಿಚಾರ ಬಾರದೆ ಇದ್ದರು ವಿಚಾರ ಮಾತ್ರ ಚರ್ಚೆ ಆಗುತ್ತದೆ.