Thursday, December 12, 2024
Homeಜಿಲ್ಲೆಮೈಸೂರುCommission In Dussehra Too | ದಸರಾದಲ್ಲೂ ಕಮಿಷನ್ ಕಾಟ : ಬಸವರಾಜ ಬೊಮ್ಮಾಯಿ ಲೇವಡಿ

Commission In Dussehra Too | ದಸರಾದಲ್ಲೂ ಕಮಿಷನ್ ಕಾಟ : ಬಸವರಾಜ ಬೊಮ್ಮಾಯಿ ಲೇವಡಿ

ಮೈಸೂರು | ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್ ಅವರಿಗೆ ಕಾರ್ಯಕ್ರಮ ನೀಡಲು ಕಮಿಷನ್ ಕೇಳಿರುವುದು ರಾಜ್ಯದ ಮಾನ ಹರಾಜು ಆಗುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಿಗಳ ವರ್ಗಾವಣೆಗೆ, ಕಾಂಟ್ರಾಕ್ಟರ್ ಗಳಿಗೆ ಬಿಲ್ ನೀಡಲು ಕಮಿಷನ್ ಪಡೆಯುತ್ತಿದ್ದ ಈ ಸರ್ಕಾರದ ಕಮಿಷನ್ ದಂಧೆ ವಿಶ್ವ ವಿಖ್ಯಾತ ಮೈಸೂರು  ದಸರಾಗೂ ವಿಸ್ತರಿಸಿದ್ದು ನಾಡಿನ ದುರಂತ.

ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್ ಅವರಿಗೆ ದಸರಾದಲ್ಲಿ ಕಾರ್ಯಕ್ರಮ ನೀಡಲು ಅವಕಾಶ ಕಲ್ಪಿಸಲು ಅಧಿಕಾರಿಗಳು ಕಮಿಷನ್ ಕೇಳಿದ್ದು ಕರ್ನಾಟಕದ ಮಾನ ಹರಾಜಾಗುವಂತೆ ಮಾಡಿದೆ. ಇಂತ ಅತಿ ಭ್ರಷ್ಟ ಸರ್ಕಾರವನ್ನು ಸ್ವಾತಂತ್ರ ಭಾರತದ ಇತಿಹಾಸದಲ್ಲಿಯೇ ಕಂಡಿರಲಿಲ್ಲ ಎಂದು ಹೇಳಿದ್ದಾರೆ.

ಖ್ಯಾತ ಸರೋದ್ ವಾದಕ ಪಂ. ರಾಜೀವ್  ತಾರಾನಾಥ್ ಅವರೇ ಕಮಿಷನ್ ಬೇಡಿಕೆಯನ್ನು  ಮಾಧ್ಯಮಗಳ ಮೂಲಕ ಬಹಿರಂಗ ಪಡಿಸಿದ್ದು, ಕಮಿಷನ್ ಕೇಳಿದ ಅಧಿಕಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments