ತುಮಕೂರು | ತುಮಕೂರು ಜಿಲ್ಲೆಯಲ್ಲಿರುವ 11 ವಿಧಾನಸಭಾ ಕ್ಷೇತ್ರಗಳಲ್ಲಿ ಹೈ ವೋಲ್ಟೇಜ್ ವಿಧಾನಸಭಾ ಕ್ಷೇತ್ರ ಎಂದೆನಿಸಿಕೊಂಡಿರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ, ಜೆಡಿಎಸ್ ಜೊತೆಗೆ ಕಾಂಗ್ರೆಸ್ ಕೂಡ ಸಾಕಷ್ಟು ಪೈಪೋಟಿ ನೀಡುತ್ತಿದೆ.
ಇತ್ತೀಚೆಗಷ್ಟೇ ಶಾಸಕ ಮಸಾಲೆ ಜಯರಾಮ್ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಭಾರಿ ಪೈಪೋಟಿ ಇದೆ ಎಂದು ಹೇಳಿಕೆ ನೀಡಿದ್ದರು. ಇದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕೂಡ ಹುಮ್ಮಸ್ಸನ್ನು ಹೆಚ್ಚಿಸಿದೆ.
ಬಿಜೆಪಿಯಿಂದ ಶಾಸಕ ಮಸಾಲೆ ಜಯರಾಮ್ ಜೆಡಿಎಸ್ ಪಕ್ಷದಿಂದ ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ ಇನ್ನು ಕಾಂಗ್ರೆಸ್ ಪಕ್ಷದಿಂದ ಬೆಮೆಲ್ ಕಾಂತರಾಜು ಸ್ಪರ್ಧಿಸುತ್ತಿದ್ದು ಬಹುತೇಕ ಮೂರು ಪಕ್ಷಗಳಲ್ಲೂ ಭಾರಿ ಪೈಪೋಟಿ ಏರ್ಪಡುತ್ತಿದೆ.
ಇನ್ನು ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವುದಕ್ಕೂ ಮುನ್ನವೇ ಬೆಮೆಲ್ ಕಾಂತರಾಜ್ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ಭೇಟಿ ನೀಡಿ ಮತದಾರರನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದರು.
ಇದೀಗ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ. ಇಂದು ಚುನಾವಣೆಗೆ ಕೇವಲ 13 ದಿನಗಳು ಮಾತ್ರ ಬಾಕಿ ಉಳಿದಿವೆ .ಹೀಗಿರುವಾಗ ಪ್ರತಿಯೊಂದು ಮನೆಗೂ, ಮನೆ ಮನೆ ಪ್ರಚಾರವನ್ನು ಮಾಡುತ್ತಿದ್ದಾರೆ. ಇನ್ನು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಗೆ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ.
ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಹುತೇಕ ಯುವಕರು ಬೆಮೆಲ್ ಕಾಂತರಾಜು ಪರ ನಿಂತಿದ್ದು, ಅವರ ಪರವಾಗಿ ಪ್ರಚಾರ ಕಾರ್ಯವನ್ನು ನಡೆಸುತ್ತಿದ್ದಾರೆ. ಇದು ಒಂದು ರೀತಿ ಅವರಿಗೆ ಚುನಾವಣೆ ಎದುರಿಸಲು ಶಕ್ತಿಯನ್ನು ನೀಡಿದೆ.
ಒಟ್ಟಾರೆಯಾಗಿ ನೋಡುವುದಾದರೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಕಳೆದ ಚುನಾವಣೆಗಳನ್ನು ನೋಡಿದರೆ ಬಿಜೆಪಿ ವರ್ಸಸ್ ಜೆಡಿಎಸ್ ಪೈಪೋಟಿ ಎಂದು ಹೇಳಲಾಗುತ್ತಿತ್ತು. ಆದರೆ ಈ ಬಾರಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಎಂದು ಹೇಳಲಾಗುತ್ತಿದೆ, ಹೀಗಾಗಿ ಬೆಮೆಲ್ ಕಾಂತರಾಜು ಕಾಂಗ್ರೆಸ್ ಅಭ್ಯರ್ಥಿಯಾಗಿ ಜೋರಾಗಿ ಸೌಂಡ್ ಮಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತದಾರ ಪ್ರಭುಗಳು ಯಾರ ಕಡೆ ಒಲವು ತೋರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.