ಬೆಂಗಳೂರು | ಪಕ್ಷದ ಜವಾಬ್ದಾರಿಯನ್ನು (Congress party’s responsibility) ನೀಡುವ ವಿಚಾರದಲ್ಲಿ ಉಳಿದೆಲ್ಲಾ ಪಕ್ಷಗಳಿಗಿಂತ ಕಾಂಗ್ರೆಸ್ ಪಕ್ಷ ವಿಭಿನ್ನವಾಗಿದ್ದು, ಅದರಲ್ಲೂ ಕೆಪಿಸಿಸಿ ಅಧ್ಯಕ್ಷರಾದ ನಂತರ ಡಿಕೆ ಶಿವಕುಮಾರ್ ಸಾಕಷ್ಟು ಮೇಜರ್ ಸರ್ಜರಿ ಮಾಡಿದ್ದಾರೆ. ನಾಯಕರುಗಳ ಹಿಂದೆ ಸುತ್ತುವರನ್ನು ಪಕ್ಕಕ್ಕಿಟ್ಟು ಪಕ್ಷಕ್ಕಾಗಿ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು ಎಂದು ಇದೀಗ ಪಕ್ಷದಲ್ಲಿ ಕೆಲಸ ಮಾಡದೆ ಬರಿ ಓಡಾಡಿಕೊಂಡು ಇದ್ದಂತಹ ಮುಖಂಡರುಗಳಿಗೆ ಶಾಕ್ ನೀಡಿದ್ದಾರೆ. ಜೊತೆಗೆ ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವುದನ್ನು ಡಿಕೆ ಶಿವಕುಮಾರ್ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.
ಇದನ್ನು ಓದಿ : International Epilepsy Awareness Day | ಮೂರ್ಛೆ ರೋಗ ಯಾಕೆ ಬರುತ್ತೆ, ಯಾರಿಗೆ ಬರುತ್ತೆ ಗೊತ್ತಾ..? ಇಲ್ಲಿದೆ ನೋಡಿ ಈ ಬಗ್ಗೆ ಮಾಹಿತಿ
ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ (Congress party’s responsibility) ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ ಡಿ ಕೆ ಶಿವಕುಮಾರ್.
ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲವು ಮಂತ್ರಿಗಳ ಆಪ್ತರನ್ನು ಕೈಬಿಡಲಾಗಿದೆ ಎಂಬ ಚರ್ಚೆ ಇದೆ ಎಂದು ಕೇಳಿದಾಗ, ಯಾವ ಚರ್ಚೆ? ನಿಮ್ಮ ಬಳಿ ಮಾತಾಡಿರಬಹುದು. ನನ್ನ ಬಳಿ ಯಾರೂ ಮಾತನಾಡಿಲ್ಲ. ನಮಗೆ ಕೆಲಸ ಮಾಡುವವರು ಬೇಕು. ಅವರಿಗೆ ಜವಾಬ್ದಾರಿ (Congress party’s responsibility) ಕೊಟ್ಟರೆ ತಕ್ಕ ಫಲಿತಾಂಶ ಬರಬೇಕು. ನಮ್ಮ ಸುತ್ತ ಗಿರಿಗಿಟ್ಲೆಯಂತೆ ಸುತ್ತುತ್ತಿದ್ದರೆ ಆಗುವುದಿಲ್ಲ. ತಾಲೂಕಿನಲ್ಲಿ ಕೂತು, ಅಲ್ಲಿರುವ ಸಮಸ್ಯೆ ಬಗೆಹರಿಸಬೇಕು. ಫಲಿತಾಂಶ ಬರುವ ನಾಯಕತ್ವಕ್ಕೆ ಮಾತ್ರ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

ಪದಾಧಿಕಾರಿಗಳ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ನೀಡುತ್ತೀರಾ ಎಂದು ಕೇಳಿದಾಗ, ಸಧ್ಯಕ್ಕೆ ಇಲ್ಲ. ಪಟ್ಟಿ ಸಿದ್ಧವಾಗಿದ್ದು, ಯಾರಿಗೆ ಆಸಕ್ತಿ ಇಲ್ಲ ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುವುದು. ಪಕ್ಷ ಸಂಘಟನೆ ವಿಚಾರದಲ್ಲಿ ನಮಗೆ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರು ಬೇಕು. ಬೇರೆಯವರ ಒತ್ತಡದ ಮೇರೆಗೆ ನೇಮಕ ಮಾಡಿಕೊಂಡು ಸಮಯ ವ್ಯರ್ಥ ಮಾಡುವುದರಲ್ಲಿ ಪ್ರಯೋಜನವಿಲ್ಲ. ಕೆಲಸ ಮಾಡುವವರಿಗೆ ಅವಕಾಶ ನೀಡಿ ಎಂದು ಎಐಸಿಸಿ ಆದೇಶ ನೀಡಿದೆ ಎಂದು ಸ್ಪಷ್ಟಪಡಿಸಿದರು.
ಈ ವಿಚಾರವಾಗಿ ನಾವು ವರದಿ ತರಿಸಿಕೊಂಡಿದ್ದು, ಸರಿಯಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು. ಮೀಸಲಾತಿ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿ ಅವರನ್ನು ತಯಾರಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಮಂತ್ರಿಗಳ ಅಭಿಪ್ರಾಯ ಪಡೆಯುತ್ತಿದ್ದು, ಈ ವಾರವೇ ಈ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.