ಕೃಷಿ ಮಾಹಿತಿ | ಕೇಂದ್ರ ಮತ್ತು ರಾಜ್ಯ ಸರ್ಕಾರ, ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಮಹಾಮಂಡಳ ನಿ.,( Napped Karnataka), ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು (Tumkur) ಕೃಷಿ ಉತ್ಪನ್ನ ಮಾರುಕಟ್ಟೆ (Agricultural produce market) ಸಮಿತಿ ಆವರಣದಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ (ಪಿ.ಎಸ್.ಎಸ್.) ಅಡಿಯಲ್ಲಿ “ಉಂಡೆ ಕೊಬ್ಬರಿ (Copra) ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ”ವನ್ನು ಹಮ್ಮಿಕೊಳ್ಳಲಾಗಿದೆ.

Assistance Fund | ಸಹಾಯ ಧನಕ್ಕಾಗಿ ತುಮಕೂರಿನ ರೈತ ಉತ್ಪಾದಕರ ಸಂಸ್ಥೆಗಳಿಂದ ಅರ್ಜಿ ಆಹ್ವಾನ..! – karnataka360.in

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಕೃಷಿ ಮತ್ತು ರೈತರ ಕಲ್ಯಾಣ, ಆಹಾರ ಸಂಸ್ಕರಣಾ, ಕೈಗಾರಿಕೆಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. 

ಮುಖ್ಯ ಅತಿಥಿಗಳಾಗಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ,  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿಗಳು ಹಾಗೂ ಶಿರಾ ವಿಧಾನಸಭಾ ಸದಸ್ಯ ಟಿ.ಬಿ.ಜಯಚಂದ್ರ ಅವರು ಪಾಲ್ಗೊಳ್ಳಲಿದ್ದಾರೆ. ಶಾಸಕ ಜೆ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.  ವಿಶೇಷ ಆಹ್ವಾನಿತರಾಗಿ ಜಿಲ್ಲೆಯ, ಶಾಸಕರು, ಸಂಸದರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here