ತುಮಕೂರು | ತುಮಕೂರು ನಗರದಲ್ಲಿ ಕಾಂಗ್ರೆಸ್ ಪಕ್ಷ ಎಂದರೆ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಶಫಿ ಅಹಮದ್ ಎಂದು ಹೇಳಲಾಗುತ್ತಿತ್ತು. ಆದರೆ ಈ ಬಾರಿ ಅದೆಲ್ಲವನ್ನು ಪಕ್ಕಕ್ಕೆ ಸರಿಸಲಾಗಿದೆ. ಹೀಗಾಗಿ ಅವರು ಕೂಡ ಪಕ್ಷಾಂತರ ಪರ್ವಕ್ಕೆ ನಾಂದಿ ಹಾಡಿದ್ದಾರೆ.
ಹೌದು,, ತಮ್ಮ ಅಳಿಯ ಮಾಜಿ ಶಾಸಕ ಡಾ. ರಫೀಕ್ ಅಹಮದ್ ಅವರಿಗೆ ತುಮಕೂರು ನಗರ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು, ಇದೀಗ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದ ಎಸ್. ಶಫಿ ಅಹಮದ್ ಅವರು ಜೆಡಿಎಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ಅವರು ನಾಳೆ ತುಮಕೂರು ನಗರದ ಜೆಡಿಎಸ್ ಕಚೇರಿಯಲ್ಲಿ ಸಮಾರಂಭದ ಮೂಲಕವಾಗಿ ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಶಫಿ ಅಹಮದ್, ಅವರ ಬೆಂಬಲಿಗರೊಡನೆ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಇನ್ನೂ ಅಸಮಾಧಾನಗೊಂಡಿದ್ದ ಶಫಿ ಅಹಮದ್ ಅವರನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ಸಾಕಷ್ಟು ಸರ್ಕಸ್ ಮಾಡಿದ್ದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ತುಮಕೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದವರಿಗೆ ಸಾಕಷ್ಟು ಹಿನ್ನಡೆ ಆಗಲಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿದೆ. ಮುಂಬರುವ ದಿನಗಳಲ್ಲಿ ಇದು ಎಲ್ಲಿಗೆ ಹೋಗಿ ಮುಟ್ಟುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.