ಧಾರವಾಡ | ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ವಿಪರೀತ ಜಿಂಕೆಗಳ ಹಾವಳಿ ಹೆಚ್ಚಾಗಿದ್ದು ತಾಲೂಕಿನ ರೈತರು ಬೇಸತ್ತು ಹೋಗಿದ್ದಾರೆ. ತಾವು ಬೆಳೆದ ಬೆಳೆಗಳನ್ನು ಜಿಂಕೆಗಳು ಹಾಳುಮಾಡುತ್ತಿದ್ದು ದಿಕ್ಕು ತೋಚದಂತ ಸ್ಥಿತಿಯಲ್ಲಿದ್ದಾರೆ.
ಹೊಲದಲ್ಲಿ ಬೆಳೆದಿರುವ ಮೆಕ್ಕೆ ಜೋಳ, ಸೋಯಾಬಿನ್ ಮತ್ತು ಶೇಂಗಾ ಸೇರಿದಂತೆ ಹಲವಾರು ಬೆಳೆಗಳನನ್ನು ಜಿಂಕೆಗಳು ಹಾಳು ಮಾಡುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು.
ಈ ಹಿನ್ನಲೆಯಲ್ಲಿ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ರಮೇಶ ಪೂಜಾರ್ ಭೇಟಿ ನೀಡಿ ಗ್ರಾಮದ ಸೋಮರಾಯಪ್ಪ ಬಸಪ್ಪ ಯೋಗಪ್ಪನವರ ಜಮೀನಿನಲ್ಲಿ ಹಾನಿಗೋಳಗಾದ ಬೆಳೆಗಳನ್ನು ವೀಕ್ಷಿಸಿ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸದರು.