ತುಮಕೂರು | ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಪೋಟ ಮಾಡಿ ಆತಂಕವನ್ನು ಉಂಟು ಮಾಡಿದ್ದ ಆರೋಪಿ ಡ್ರೋನ್ ಪ್ರತಾಪ್ ಗೆ (Drone Prathap) ಇದೀಗ ಮಧುಗಿರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಡ್ರೋನ್ ಪ್ರತಾಪ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಪೋಟ ಮಾಡಿದ್ದರು. ಈ ಬಗ್ಗೆ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಮಧುಗಿರಿ ಜೆಎಮ್ ಎಫ್ ಸಿ ಕೋರ್ಟ್ ನ್ಯಾಯಾಂಗ ಬಂದನ ವಿಧಿಸಿತ್ತು.
ಸದ್ಯ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಮಧುಗಿರಿ 4 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ಆದೇಶ ಹೊರಡಿಸಿದ್ದಾರೆ. ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.