ಬಾಗಲಕೋಟೆ | ಕೇಂದ್ರ ಸರ್ಕಾರ (Central Govt) ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought relief) ನೀಡಿದೆ. ಕೇಳಿದಷ್ಟು ಬರ ಪರಿಹಾರ ನೀಡಿಲ್ಲ ಎಂದು ನಾಳೆ ಬೆಳಗ್ಗೆ 9.30ಕ್ಕೆ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ (Protest) ನಡೆಸಲು ಕಾಂಗ್ರೆಸ್ (Congress) ತೀರ್ಮಾನಿಸಿದೆ.
ಲೋಕಸಭೆ ಚುನಾವಣೆ, ಭಾನುವಾರ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಕೈಗೊಳ್ಳುತ್ತಿದ್ದು, ಇದರ ಮಧ್ಯೆಯೇ ಪ್ರತಿಭಟನೆ ನಡೆಸುವ ಮೂಲಕ ತಂತ್ರ ಹೆಣೆಯಲು ಕಾಂಗ್ರೆಸ್ ಸಂಚು ಹೂಡುತ್ತಿದೆ.
“ರಾಜ್ಯ ಸರ್ಕಾರವು 18,172 ಕೋಟಿ ರೂ. ಬರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದೆ. ಇಷ್ಟೂ ಹಣ ಬಿಡುಗಡೆ ಮಾಡಬೇಕು ಎಂಬುದಾಗಿ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಮಾಹಿತಿ ನೀಡಿದರು.
ಕೇಂದ್ರ ಸರ್ಕಾರ ಕೇಳಿದಷ್ಟು ಬರ ಪರಿಹಾರ ನೀಡಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಾಗಾಗಿ, ಪೂರ್ಣ ಪ್ರಮಾಣದ ಪರಿಹಾರದ ಮೊತ್ತ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ತೀರ್ಮಾನ ಮಾಡಿದೆ.