ತುಮಕೂರು | ಭಾರತ ಚುನಾವಣಾ ಆಯೋಗದ (Election Commission of India) ನಿರ್ದೇಶನದಂತೆ 132- ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ (Tumkur Nagar Assembly Constituency) ದಿನಾಂಕ 1-01-2024 ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಜನವರಿ 22, 2024 ರಂದು ಅಂತಿಮ ಮತದಾರರ ಪಟ್ಟಿಯನ್ನು (Electoral Roll) ಮಹಾನಗರಪಾಲಿಕೆ ಕಚೇರಿ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಹಾಗೂ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಸಾರ್ವಜನಿಕರು ಅಂತಿಮ ಮತದರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಖಚಿತಪಡಿಸಿಕೊಳ್ಳಬಹುದಾಗಿದೆ ಹಾಗೂ ಯಾವುದಾದರು ಹಕ್ಕು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ಆಯುಕ್ತರು ಹಾಗೂ ಮತದಾರರ ನೋಂದಣಾಧಿಕಾರಿ, 132-ತುಮಕೂರು ನಗರ ವಿಧಾನಸಭಾ ಕ್ಷೇತ್ರ, ತುಮಕೂರು ಇವರಿಗೆ ಲಿಖಿತವಾಗಿ ಅಥವಾ Voter Helpline App/NVSP ಅ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಸದಾವಕಾಶವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ಅವರು ಕೋರಿದ್ದಾರೆ.