Wednesday, February 5, 2025
Homeಜಿಲ್ಲೆಬೆಳಗಾವಿEx-Servicemen | ಮಾಜಿ ಸೈನಿಕರಿಗಾಗಿ ಹೊಸ ತೀರ್ಮಾನ ತೆಗೆದುಕೊಂಡ ಕರ್ನಾಟಕ ಸರ್ಕಾರ..!

Ex-Servicemen | ಮಾಜಿ ಸೈನಿಕರಿಗಾಗಿ ಹೊಸ ತೀರ್ಮಾನ ತೆಗೆದುಕೊಂಡ ಕರ್ನಾಟಕ ಸರ್ಕಾರ..!

ಬೆಳಗಾವಿ | ಕರ್ನಾಟಕ ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ (Ex-Servicemen) ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿರುವುದರಿಂದ,  ಅವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ  ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ,  ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜುರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6783  ಅರ್ಜಿ ವಿಲೇವಾರಿ ಮಾಡಿದ್ದು, 9282  ಅರ್ಜಿಗಳು ಬಾಕಿ ಇವೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments