ತುಮಕೂರು | ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯ ಜನಕಲೋಟಿ ಗ್ರಾಮದ ಶ್ರೀ ರಾಯರ ಬೃಂದಾವನ ಫಾರ್ಮ್ ನ ಕೃಷಿ ಹೊಂಡದಲ್ಲಿ ಸ್ಪೋಟಕ ವಸ್ತುಗಳನ್ನು ಸಿಡಿಸಿದ ಆರೋಪದ ಮೇಲೆ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ (Drone Prathap case) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಮಿಡಿಗೇಶಿಯ ಪೊಲೀಸರು ಇದೀಗ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ಆರೋಪಿ ಡ್ರೋನ್ ಪ್ರತಾಪ್ ಅವರಿಗೆ ನೀಡಿದೆ.
ಇನ್ನೂ ಡ್ರೋನ್ ಪ್ರತಾಪ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಹೆಲ್ತ್ ಚೆಕಪ್ ಮಾಡಿಸಿ. ನಂತರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಡಿಸೆಂಬರ್ 26 ರವರೆಗೆ ಮುಂದೂಡಿದೆ.