ಕೃಷಿ ಮಾಹಿತಿ | ಜಿಲ್ಲಾಡಳಿತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ (Department of Animal Husbandry and Veterinary Services) ಹಾಗೂ ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ (Cattle disease) ನಿಯಂತ್ರಣ ಕಾರ್ಯಕ್ರಮದಡಿ ಏಪ್ರಿಲ್ 1 ರಿಂದ 30 ರವರೆಗೆ ತುಮಕೂರು ಜಿಲ್ಲೆಯಾದ್ಯಂತ (Tumkur District) 5 ನೇ ಸುತ್ತಿನ ಕಾಲುಬಾಯಿ ಜ್ವರದ (Foot and mouth fever) ವಿರುದ್ಧ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ರೈತರ ಮನೆಗಳಿಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ಹಾಕಲಿದ್ದು, ಪಶುಪಾಲಕರು ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಜಾನುವಾರುಗಳಿಗೆ ತಗಲುವ ಕಾಲುಬಾಯಿ ಜ್ವರ ರೋಗವನ್ನು ನಿಯಂತ್ರಿಸುವಲ್ಲಿ ಪೂರ್ಣ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.