Heavy rain in Bengaluru |  ಹೆಚ್ಚಿಗೆ ಮಳೆ ಬಂದಷ್ಟು ಸರ್ಕಾರಕ್ಕೆ ಲಾಭ – ಡಿ ಕೆ ಶಿವಕುಮಾರ್

ಬೆಂಗಳೂರು | ಮಳೆ ಬರಬೇಕು. ಹೆಚ್ಚಿಗೆ ಮಳೆ ಬಂದಷ್ಟು ಸರ್ಕಾರಕ್ಕೆ ಲಾಭ (Heavy rain in Bengaluru). ಭಾನುವಾರ ರಾತ್ರಿ ಸುರಿದ ಮಳೆಯಿಂದ ಗೋಡೆ ಕುಸಿದು ಒಂದು ಸಾವಾಗಿದೆ ಎಂದು ಮಾಹಿತಿ ಬಂದಿದೆ. ಉಳಿದಂತೆ ಯಾವುದೇ ಅವಘಡ ಸಂಭವಿಸಿಲ್ಲ. ನಮ್ಮ ಅಧಿಕಾರಿಗಳ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಕೆಲವು ತಗ್ಗು ಪ್ರದೇಶಗಳಲ್ಲಿ ಮನೆ ಕಟ್ಟಿಕೊಂಡಿರುವ ಜಾಗದಲ್ಲಿ ನೀರು ನುಗ್ಗಿದೆ. ಮಳೆ ಹಾನಿ ಪ್ರದೇಶಕ್ಕೆ ನಾನು ಮುಖ್ಯಮಂತ್ರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ (DK Sivakumar) ಎಂದರು.

ಕುಮಾರಸ್ವಾಮಿ ಅವರು ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇಲ್ಲಿಗೆ ಪ್ರವಾಸ ಮಾಡುವುದಕ್ಕೆ ಬಂದಿದ್ದೇನೆ, ಜನರ ಬದುಕು ಸರಿ ಮಾಡುವ ಉದ್ದೇಶದೊಂದಿಗೆ ಬಂದಿದ್ದೇನೆ. ಅವರು ವಿರೋಧ ಪಕ್ಷದಲ್ಲಿದ್ದಾರೆ ಅವರಿಗೆ ಮತ್ತು ಆರ್.ಅಶೋಕ್ ಅವರಿಗೆ ಸರ್ಕಾರದ ವಿರುದ್ಧ ಟೀಕೆ ಮಾಡದಿದ್ದರೆ ಅವರಿಗೆ ಸಮಾಧಾನ ಆಗುವುದಿಲ್ಲ. ಅವರ ಸ್ಥಾನಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ನಾಲ್ಕು ಮಾತು ಆಡಿದ್ದಾರೆ ಎಂದು ವ್ಯಂಗ್ಯ ಮಾಡಿದರು.  

ಮಳೆ ಪ್ರಕೃತಿ, ಅದು ಯಾರ ನಿಯಂತ್ರಣದಲ್ಲೂ ಇಲ್ಲ. ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ನಮ್ಮ ಅಧಿಕಾರಿಗಳು ನಾಲ್ಕು ದಿನಗಳಿಂದಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲಿ ಮಳೆ ನೀರುಗಾಲುವೆಯನ್ನು ಶಾಶ್ವತವಾಗಿ ರೂಪಿಸಲು ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ವಿಶ್ವಬ್ಯಾಂಕಿನಿಂದ ಹಾಗೂ ವಿಪತ್ತು ನಿರ್ವಹಣಾ ಇಲಾಖೆಯಿಂದ 2 ಸಾವಿರ ಕೋಟಿಯಷ್ಟು ನೆರವು ಪಡೆಯಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *