ಕೃಷಿ ಮಾಹಿತಿ | ತೋಟಗಾರಿಕೆ ಇಲಾಖೆಯು (Horticulture Department) ರಾಜ್ಯದ ವಿವಿಧ ಭಾಗಗಳಲ್ಲಿನ 10 ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2025ರ ಮೇ 2 ರಿಂದ 2026ರ ಫೆಬ್ರವರಿ 28ರವರೆಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಅರ್ಹ ರೈತ ಮಕ್ಕಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : Congress party’s responsibility | ಕಾಂಗ್ರೆಸ್ ನಾಯಕರಿಗೆ ಖಡಕ್ ಸೂಚನೆ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಅಭ್ಯರ್ಥಿಗಳು (Horticulture Department) ಅರ್ಜಿ ಸಲ್ಲಿಸುವುದು ಹೇಗೆ..?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಪ.ಜಾತಿ/ಪಂಗಡದ ಅಭ್ಯರ್ಥಿಗಳು 18 ರಿಂದ 33 ವರ್ಷ ಹಾಗೂ ಇತರರು 18 ರಿಂದ 30 ವರ್ಷ ವಯೋಮಾನದೊಳಗಿನವರಾಗಿರಬೇಕು.
ಅರ್ಜಿಯೊಂದಿಗೆ ಸಾಮಾನ್ಯ ಅಭ್ಯರ್ಥಿಗಳು 30 ರೂ. ಹಾಗೂ ಪ.ಜಾತಿ/ಪಂಗಡದ ಅಭ್ಯರ್ಥಿಗಳು 15 ರೂ.ಗಳ ಅರ್ಜಿ ಶುಲ್ಕವನ್ನು ಇಂಡಿಯನ್ ಪೋಸ್ಟಲ್ ಆರ್ಡರ್/ಡಿಮ್ಯಾಂಡ್ ಡ್ರಾಫ್ಟನ್ನು ತೋಟಗಾರಿಕೆ (Horticulture Department) ಉಪನಿರ್ದೇಶಕರು(ಜಿ.ಪಂ.) ತುಮಕೂರು ಅವರ ಹೆಸರಿನಲ್ಲಿ ಪಡೆದು ಸಲ್ಲಿಸಬೇಕು.
ಅರ್ಜಿಯನ್ನು ಇಲಾಖಾ ವೆಬ್ಸೈಟ್ https://horticulturedir.karnataka.gov.in ಅಥವಾ ಹಿರಿಯ ಸಹಾಯಕ ತೋಟಗಾರಿಕೆ (Horticulture Department) ನಿರ್ದೇಶಕರು(ರಾಜ್ಯವಲಯ), ತುಮಕೂರು ಇವರಿಂದ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 1 ರೊಳಗಾಗಿ ಸಲ್ಲಿಸಬೇಕು. ತರಬೇತಿಗೆ ಆಯ್ಕೆ ಮಾಡಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2278647ನ್ನು ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ (Horticulture Department) ನಿರ್ದೇಶಕರು ತಿಳಿಸಿದ್ದಾರೆ.