ಹಾವೇರಿ | ಇತ್ತೀಚೆಗೆ ಹೊಸರಿತ್ತಿ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದ ಕುರಿತು ಸಿಐಡಿ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಿಂದಪ್ಪ ಪೂಜಾರ್ ಎನ್ನುವ ವ್ಯಕ್ತಿ ಹೊಸರಿತ್ತಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಬಗ್ಗೆ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ಈ ಪ್ರಕರಣ ಸ್ಥಳೀಯ ಪೊಲೀಸರಿಂದ ವಿಚಾರಣೆ ಸಾಧ್ಯವಿಲ್ಲ. ಸಿಐಡಿ ಯಿಂದ ವಿಚಾರಣೆ ಆಗಬೇಕು ಎಂದು ಈಗಾಗಲೇ ಡಿಜಿಯವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ಬಹಳಷ್ಟು ಸಂಶಯಗಳಿವೆ. ಮೇಲ್ನೋಟಕ್ಕೆ ಪೊಲೀಸರ ಹಲ್ಲೆಯಿಂದ ವ್ಯಕ್ತಿ ಅಸ್ತವ್ಯಸ್ತವಾಗಿ ಸತ್ತಿದ್ದಾನೆಂದು ಅನ್ನಿಸುತ್ತಿದೆ. ಸ್ಪಷ್ಟವಾಗಿ ಏನೇನು ನಡೆದಿದೆ ಎಂದು ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.