Thursday, December 12, 2024
Homeಜಿಲ್ಲೆಚಿಕ್ಕಬಳ್ಳಾಪುರJC Madhuswamy Car Accident | ಗುಜರಿ ಆಟೋಗೆ ಡಿಕ್ಕಿ ಹೊಡೆದ ಮಾಜಿ ಸಚಿವ ಜೆ...

JC Madhuswamy Car Accident | ಗುಜರಿ ಆಟೋಗೆ ಡಿಕ್ಕಿ ಹೊಡೆದ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಕಾರು..!

ಚಿಕ್ಕಮಗಳೂರು | ಮಾಜಿ ಸಚಿವ ಬಿಜೆಪಿ ಹಿರಿಯ ನಾಯಕ ಜೆಸಿ ಮಾಧುಸ್ವಾಮಿ (JC Madhuswamy) ಅವರ ಕಾರು (Car) ಚಿಕ್ಕಮಗಳೂರು (Chikmagalur) ಜಿಲ್ಲೆ ಕಡೂರು ತಾಲೂಕಿನಲ್ಲಿ ಅಪಘಾತಕ್ಕೆ (Accident) ಒಳಗಾಗಿದೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಬೀರೂರಿನಲ್ಲಿ ನಡೆಯುತ್ತಿದ್ದ ಪ್ರಚಾರ ಕಾರ್ಯಕ್ರಮಕ್ಕೆ ತೆರಳುವ ವೇಳೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಗುಜರಿ ಆಟೋ ಗೆ ಡಿಕ್ಕಿ ಹೊಡೆದಿದೆ. ಇನ್ನು ಈ ಘಟನೆಯಲ್ಲಿ ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.

ಬೀರೂರಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments