ಮಂಡ್ಯ | ಕನ್ನಡ ಸಾಹಿತ್ಯ ಲೋಕದ ಜಾತ್ರೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಮಂಡ್ಯ ಜಿಲ್ಲೆಯಲ್ಲಿ ಅದ್ದೂರಿಯಾಗಿ ನೆರವೇರಿದ್ದು, ಅನೇಕ ಪ್ರಗತಿಪರ ವಿಚಾರಗಳು ಕೂಡ ಚರ್ಚೆ ಆಗಿವೆ. ಇದೀಗ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಯುತ್ತದೆ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದ್ದು ಇದಕ್ಕೆ ತೆರೆ ಬಿದ್ದಿದೆ.
ಹೌದು… ಮಂಡ್ಯ ಜಿಲ್ಲೆಯಲ್ಲಿ ಯಶಸ್ವಿಯಾಗಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದ್ದು, 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವೇದಿಕೆ ಕೊಟ್ಟ ಗಣಿ ನಾಡು
ಸುಮಾರು 68 ವರ್ಷಗಳ ಬಳಿಕ ಗಣಿ ನಾಡಾದ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ಘೋಷಣೆ ಮಾಡಲಾಗಿದೆ.
ಈ ಹಿಂದೆ 1926 ಹಾಗೂ 1938 ರಲ್ಲಿ ಗಣಿ ನಾಡು ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಇದಾದ ಬಳಿಕ 2025ರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜನೆ ಮಾಡುತ್ತಿರುವುದು ಗಣಿ ನಾಡಿನ ಸಾಹಿತ್ಯ ಪ್ರೇಮಿಗಳಲ್ಲಿ ಸಂತಸವನ್ನು ಉಂಟು ಮಾಡಿದೆ.