ಬೆಂಗಳೂರು | ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಹಿಂದೆ ನೀಡಿದಂತಹ ದಿನಾಂಕವನ್ನು ಪರಿಷ್ಕರಣೆ (Date Revision) ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಹೊಸ ಆದೇಶವನ್ನು ಹೊರಡಿಸಿದೆ.
ಹೌದು,,, ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆಬ್ರವರಿ 20 2024 ರಂದು ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. ಪ್ರಾಧಿಕಾರದ ಅಧಿಸೂಚನೆಯಲ್ಲಿ ಮಾರ್ಚ್ 3 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಆನ್ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 05-04-2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 04-05-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 07-05-2024 (ಬ್ಯಾಂಕ್ ಕೆಲಸದ ವೇಳೆಯವರೆಗೆ)