ಬೆಳಗಾವಿ | ಸಂಕ್ರಾಂತಿ ಹಬ್ಬದ ದಿನವಾದ ಇಂದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ (Lakshmi Hebbalkar Car Accident) ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಯಲ್ಲಿ ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಡೆದಿದೆ.
ನಾಯಿ ತಪ್ಪಿಸಲು ಹೋಗಿ, ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar Car Accident) ಸೇರಿದಂತೆ ಕಾರಿನಲ್ಲಿದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಷ್ಟೇ ಆಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಾದ ನಂತರ ಅವರನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಕಾರು (Lakshmi Hebbalkar Car Accident) ಅಪಘಾತದಕ್ಕೆ ಕಾರಣ
ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ದಾರಿಯಲ್ಲಿ ನಾಯಿ ಅಡ್ಡ ಬಂದಿತು. ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ, ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಆಸ್ಪತ್ರೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಣೆ
ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ದಾಖಲಿಸಿರುವ ಆಸ್ಪತ್ರೆಗೆ ಬೆಳಗಾವಿ ಎಸ್‌ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಇದರ ಜೊತೆಗೆ, ಹೆಬ್ಬಾಳ್ಕರ್ ಅವರ ತಾಯಿ ಹಾಗೂ ಸಹೋದರಿಯು ಕೂಡ ಆಸ್ಪತ್ರೆಗೆ ಆಗಮಿಸಿ ಅವರಿಗೆ ಧೈರ್ಯ ನೀಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕರೆ ಮಾಡಿದ ಡಾ. ಜಿ. ಪರಮೇಶ್ವರ್
ಕೇಂದ್ರ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ದೂರವಾಣಿ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಅವರ ಪುತ್ರ ಮೃಣಾಲ್ ಅವರನ್ನು ಕರೆಮಾಡಿ, ತಾಯಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರು
ಅಪಘಾತದ ಗಂಭೀರತೆಯನ್ನು ಗಮನಿಸಿದರೆ, ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವುದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪರವಾಗಿ ದೊಡ್ಡ ಅದೃಷ್ಟವೆನಿಸಿದೆ.