ತುಮಕೂರು | ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ (Lok Sabha Elections) ಸಂಬಂಧ 19-ತುಮಕೂರು ಲೋಕಸಭಾ ಚುನಾವಣಾ ಮತದಾನವು (Voting) ಏಪ್ರಿಲ್ 26 ರಂದು ನಡೆಯಲಿದ್ದು, ಸಾರ್ವಜನಿಕರು ಮತಗಟ್ಟೆ ಕೇಂದ್ರಗಳಿಗೆ ಮೊಬೈಲ್ (Mobile) ತರುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ (Returning Officer Shubha Kalyan) ತಿಳಿಸಿದ್ದಾರೆ.
ಮತದಾರರು ಮತ ಚಲಾಯಿಸಲು ಮತಗಟ್ಟೆಗೆ ಬರುವ ಸಂದರ್ಭದಲ್ಲಿ ಮೊಬೈಲ್‌ಗಳನ್ನು ತರಬಾರದು. ಮತಗಟ್ಟೆ ಕೇಂದ್ರದೊಳಗೆ ಮೊಬೈಲ್‌ಗಳನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ತಮ್ಮ ಮೊಬೈಲ್‌ಗಳನ್ನು ಮನೆಯಲ್ಲಿಯೇ ಬಿಟ್ಟು ಬರುವಂತೆ ಅವರು ಮನವಿ ಮಾಡಿದ್ದಾರೆ.