ತುಮಕೂರು | ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮತದಾನ (Voting) ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾದ್ಯಂತ ‘ಒಣ ದಿನ’ಗಳೆಂದು (dry day) ಘೋಷಿಸಿ ಎಲ್ಲಾ ಮದ್ಯದ ವಹಿವಾಟುಗಳನ್ನು ನಿಷೇಧಿಸಿ (Prohibition of sale of liquor) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ (ShuBha Kalyan) ಅವರು ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾದೇಶ ಈಗಾಗಲೇ ಜಾರಿಯಲ್ಲಿದ್ದು, ಏಪ್ರಿಲ್ 26ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂನ್ 3ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರ ಮಧ್ಯರಾತ್ರಿ 12 ಗಂಟೆಯವರೆಗೆ ಅನ್ವಯಿಸುತ್ತದೆ.
ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ನಿಷೇಧಾವಧಿಯಲ್ಲಿ ಎಲ್ಲಾ ರೀತಿಯ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ಸೇರಿದಂತೆ ಮದ್ಯದ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ.